ಬ್ಯಾಂಕ್ ಆಫ್ ಇಂಡಿಯಾದಲ್ಲಿ ಅಪ್ರೆಂಟಿಸ್ ನೇಮಕಾತಿ 2025 – Bank of India Apprentice Recruitment 2025
ಕರ್ನಾಟಕ ಬಜೆಟ್ 2025: ಸಿದ್ದರಾಮಯ್ಯನ 16ನೇ ಬಜೆಟ್ ಅಧಿವೇಶನಕ್ಕೆ ರಾಜಕೀಯ ಕಣ್ಣು
Bank of India Apprentice Recruitment 2025: ಬ್ಯಾಂಕ್ ಆಫ್ ಇಂಡಿಯಾದಲ್ಲಿ ಅಗತ್ಯವಿರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ವೇತನ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ. ಸಂಪೂರ್ಣ ಮಾಹಿತಿಯನ್ನು ಓದಿ ಮತ್ತು ಅರ್ಜಿ ಸಲ್ಲಿಸಲು ತಯಾರಿ ಮಾಡಿ.
ಸೌತ್ ಈಸ್ಟ್ ಸೆಂಟ್ರಲ್ ರೈಲ್ವೆ ನೇಮಕಾತಿ 2025
ಹುದ್ದೆ: ಅಪ್ರೆಂಟಿಸ್
ಕರ್ತವ್ಯ ಸ್ಥಳ: ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ: ಒಟ್ಟು 400 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಕರ್ನಾಟಕದಲ್ಲಿ 12 ಹುದ್ದೆಗಳು ಖಾಲಿಯಿದೆ.
ಶೈಕ್ಷಣಿಕ ಅರ್ಹತೆ: ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಯಾವುದೇ ಪದವಿ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಯೋಮಾನ: 01/01/2025 ಕನಿಷ್ಠ 20 ವರ್ಷ ಮತ್ತು ಗರಿಷ್ಠ 28 ವರ್ಷ ವಯೋಮಿತಿ ನಿಗದಿಯಾಗಿದೆ.
ವಯೋಮಿತಿ ಸಡಿಲಿಕೆ:
ಒಬಿಸಿ ಅಭ್ಯರ್ಥಿಗಳಿಗೆ: 3 ವರ್ಷ
ಪ.ಜಾತಿ, ಪ.ಪಂಗಡ ಅಭ್ಯರ್ಥಿಗಳಿಗೆ: 5 ವರ್ಷ
ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ: 10 ವರ್ಷ
ಆಯ್ಕೆ ವಿಧಾನ:
ಆನ್‌ಲೈನ್ ಪರೀಕ್ಷೆ
ದಾಖಲೆಗಳ ಪರಿಶೀಲನೆ
ಸ್ಥಳೀಯ ಭಾಷಾ ಪರೀಕ್ಷೆ
ಸ್ಟೈಫಂಡ್: ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 12,000 ಸ್ಟೈಫಂಡ್ ನೀಡಲಾಗುತ್ತದೆ.
ಅರ್ಜಿ ಸಲ್ಲಿಕೆಯ ವಿಧಾನ:
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಅಧಿಕೃತ ಅಧಿಸೂಚನೆಯನ್ನು ಓದಿ.
ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿ.
ಇಲಾಖೆಯ ವೆಬ್‌ಸೈಟ್‌ಗೆ ಭೇಟಿ ನೀಡಿ ಅಥವಾ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಅರ್ಜಿಯಲ್ಲಿ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ, ಪರಿಶೀಲಿಸಿ.
ಅಗತ್ಯವಿದ್ದರೆ ಪ್ರಮಾಣ ಪತ್ರ/ದಾಖಲೆಗಳನ್ನು ಅಪ್ಲೋಡ್ ಮಾಡಿ.
ಅಗತ್ಯವಿದ್ದರೆ, ನಿಗದಿತ ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ಅರ್ಜಿ ಶುಲ್ಕ:
ಸಾಮಾನ್ಯ, ಒಬಿಸಿ ಅಭ್ಯರ್ಥಿಗಳು – ರೂ. 800
ಪ.ಜಾತಿ, ಪ.ಪಂಗಡ, ಮಹಿಳಾ ಅಭ್ಯರ್ಥಿಗಳು – ರೂ. 600
ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳು – ರೂ. 400
ಶುಲ್ಕ ಪಾವತಿಸುವ ವಿಧಾನ: ನಿಗದಿತ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬಹುದು.
CISF ಕಾನ್ಸ್‌ಟೇಬಲ್/ಟ್ರೇಡ್ಸ್‌ಮೆನ್ ಹುದ್ದೆಗಳ ನೇಮಕಾತಿ 2025 – CISF Constable Tradesmen Recruitment 2025
ಅರ್ಜಿಯನ್ನು ಸಲ್ಲಿಸಲು ದಿನಾಂಕ:
ಪ್ರಾರಂಭ ದಿನಾಂಕ: ಮಾರ್ಚ್ 01, 2025
ಕೊನೆಯ ದಿನಾಂಕ: ಮಾರ್ಚ್ 15, 2025
ಈ ನೇಮಕಾತಿಯ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ. ಅರ್ಜಿ ಸಲ್ಲಿಸುವ ಮುನ್ನ ಎಲ್ಲಾ ಮಾಹಿತಿಯನ್ನು ಖಚಿತಪಡಿಸಿಕೊಳ್ಳಿ ಮತ್ತು ಸಮಯಕ್ಕೆ ಮುನ್ನ ಅರ್ಜಿ ಸಲ್ಲಿಸಿ.
.jpg)
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ